ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್ (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.
ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films) ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.