ರಾಜ್ಯ ಸರ್ಕಾರವು ಮಹತ್ವದ ಅಪ್ಡೇಟ್ಸ್ ನೀಡಿದೆ. ಸಿರಿಧಾನ್ಯ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕರ್ನಾಟಕದ ಹಲವು ಭಾಗದಲ್ಲಿ ಮಳೆ ಆಗ್ತಿದೆ
ಕರ್ನಾಟಕದ ಎಲ್ಲ ರೈತರು ಹೆಚ್ಚಾಗಿ ಸಿರಿಧಾನ್ಯ ಬೆಳೆಯಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಸಿರಿಧಾನ್ಯ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಧಿಸಬಹುದು.
ಪ್ರಸ್ತುತ ಹೆಕ್ಟೇರ್ಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಈಚೆಗೆ ಆಯೋಜಿಸಿದ್ದ ಸಿರಿಧಾನ್ಯ ಮೇಳಕ್ಕೆ ಜನರು ಹಾಗೂ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೃಷಿ ಇಲಾಖೆಯು ಜನವರಿ ಐದರಿಂದ ಏಳರ ವರೆಗೆ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಆಯೋಜಿಸಿತ್ತು.
ಇದಕ್ಕೆ • ಕೀನ್ಯ • ಕುವೈತ್ •ಯುಎಇ • ಆಸ್ಟ್ರೇಲಿಯಾ • ಯುರೋಪ್ ಒಕ್ಕೂಟ ರಾಷ್ಟ್ರಗಳಿಂದಲೂ ಜನ ಹಾಗೂ ಪ್ರತಿನಿಧಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
ಅಲ್ಲದೇ ಇದರಲ್ಲಿ ದೇಶದ 16 ರಾಜ್ಯಗಳಿಂದ ಜನ ಬಂದಿದ್ದರು 190 ಸಂಸ್ಥೆಗಳು ಭಾಗವಹಿಸಿದ್ದವು. ಮೇಳದಲ್ಲಿ ಪುಂಗನೂರು
ಗಿಡ್ಡ ಹಸುಗಳು ಮತ್ತು ಆಡಿನ ಹಾಲಿನ ಉತ್ಪನ್ನಗಳು ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದವು.
ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಮಂಗಳವಾರ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.
ದಕ್ಷಿಣ ಕರ್ನಾಟಕದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಲಿದೆ.
ಇನ್ನು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ,
ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು
ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.