ಚಂಡೀಗಢ:- ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ʻಕೈʼ ಕಾರ್ಯಕರ್ತೆ ಸೂಟ್ಕೇಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಮಹಿಳೆಯನ್ನು ಹಿಮಾನಿ ನರ್ವಾಲ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು ಉನ್ನತಮಟ್ಟದ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್ಕೇಸ್ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದಾರೆ. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾ ಬಿಗಿಯಲಾಗಿತ್ತು. ಹೀಗಾಗಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.