ಭಾರತ ವಿರುದ್ದ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ 29 ರನ್ ಗಳಿಸಿದ ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಅವರು ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ.
ಈ ಹಿಂದೆ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ಇಂಡೋ-ಆಂಗ್ಲ 32 ಟೆಸ್ಟ್ ಪಂದ್ಯಗಳಿಂದ 2535 ರನ್ಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಇದರಲ್ಲಿ 7 ಶತಕಗಳು ಹಾಗೂ 13 ಅರ್ಧಶತಕಗಳನ್ನು ಸಿಡಿಸಿದ್ದರು.
ಭಾರತ vs ಇಂಗ್ಲೆಂಡ್ ಟೆಸ್ಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರು
ಜೋ ರೂಟ್-2554*
ಸಚಿನ್ ತೆಂಡೂಲ್ಕರ್-2535
ಸುನೀಲ್ ಗವಾಸ್ಕರ್-2348
ಸರ್ ಅಲ್ಸ್ಟೈರ್ ಕುಕ್- 2431
ವಿರಾಟ್ ಕೊಹ್ಲಿ-1991