ಯಲ್ಲಾಪುರ:- ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.