ಬೆಂಗಳೂರು:- ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಚನ್ನಪಟ್ಟಣದಲ್ಲಿ ಬಂದಿರುವ 10 ಸಾವಿರ ಅರ್ಜಿಗಳೇ ಸಾಕ್ಷಿ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ.
IND vs ZIM: ಜಿಂಬಾಬ್ವೆ ವಿರುದ್ಧದ ಹೀನಾಯ ಸೋಲಿಗೆ ನಾಯಕ ಶುಭ್ಮನ್ ಗಿಲ್ ಕೊಟ್ಟ ಕಾರಣ ಹೀಗಿದೆ!
ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಟಾಂಗ್ ಕೊಟ್ಟಿದ್ದಾರೆ.
ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಮರು ಪ್ರಶ್ನಿಸಿದ್ದಾರೆ.
ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಡಿಸಿಎಂ” ಕಾರ್ಯಕ್ರಮದ ನಡುವೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ? ನಮಗೂ ರಾಜಕಾರಣ ಬರುತ್ತದೆ. ಆದರೆ ನಮಗೆ ರಾಜಕಾರಣ ಮುಖ್ಯವಲ್ಲ, ಜನರ ಸೇವೆ ಮುಖ್ಯ. ಆದ ಕಾರಣ ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ತಿವಿದರು.
ಮುಡಾ ಅಕ್ರಮದ ದಾಖಲೆಗಳನ್ನು ನಾಶ ಮಾಡಲಾಗುತ್ತಿದೆ, ಹಗರಣ ಮುಚ್ಚಿ ಹಾಕಲಾಗುತ್ತಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ ಯಾರು ಯಾವುದನ್ನು ಮುಚ್ಚಿ ಹಾಕಬೇಕಾಗಿಲ್ಲ. ಇಲ್ಲಿ ಯಾವುದೇ ಅನ್ಯಾಯವೂ ಆಗಿಲ್ಲ. ಆಸ್ತಿ ಕಳೆದುಕೊಂಡವರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಮುಡಾ ನಿಯಮದಂತೆ ಪರಿಹಾರ ನೀಡಲಾಗುತ್ತದೆ ಎಂದರು.