ಬೆಂಗಳೂರು:- ಧೂಮಪಾನ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವವರ ಹಾಗೂ ಶಾಲೆಗಳ 100 ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟಗಾರರ ವಿರುದ್ಧ ಹಾಕಲಾಗುತ್ತಿದ್ದ ದಂಡದ ಮೊತ್ತ ಹೆಚ್ಚಳವಾಗಿದೆ.
ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ.
ಇನ್ನು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಕಡೆಗಳಲ್ಲಿ ಹುಕ್ಕಾ ಬಾರ್ ನಿಷೇಧಿಸಲಾಗಿದೆ. ಹುಕ್ಕಾ ಬಾರ್ ಅನಧಿಕೃತವಾಗಿ ನಡೆಸಿದರೆ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಹಾಗೂ 3 ವರ್ಷಕ್ಕೆ ವಿಸ್ತರಣೆ ಮಾಡುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾಬಾರ್ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಬಾರ್ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ಹೇಳಿದರು