ಮುಂಬೈ:- ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 11 ಮಂದಿ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ಸಾಗುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು 11 ಮಂದಿ ಸಾವನ್ನಪ್ಪಿದ್ದಾರೆ.
ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯು ಪ್ರಯಾಣಿಕರಲ್ಲಿ ಭೀತಿ ಮೂಡಿಸಿತು. ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದಾರೆ. ರೈಲು ನಿಂತ ತಕ್ಷಣ ಪ್ರಯಾಣಿಕರು ಇಳಿದು ರೈಲ್ವೆ ಹಳಿ ಮೇಲೆ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಟ್ರ್ಯಾಕ್ನಲ್ಲಿ ವೇಗವಾಗಿ ಬರುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲು ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮವಾಗಿ 11 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿದ್ದು, 5 ಜನರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. 8 ಅಂಬುಲೆನ್ಸ್ಗಳು ಮತ್ತು ಹಲವಾರು ರೈಲ್ವೆ ರಕ್ಷಣಾ ವ್ಯಾನ್ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.