ಬೆಂಗಳೂರು: ಬದಲಾವಣೆಯೇ ಬೆಳಕು, ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಹಾಗೆ 12 ವರ್ಷ ಎನ್ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ ಈಗ ಜನರು ಬದಲಾವಣೆ ಬಯಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರೇ ಬದಲಾವಣೆ ಬಯಸಿದ್ದಾರೆ. ನಮ್ಮ ರಾಜ್ಯದಿಂದ ಕಾರ್ಯಕ್ರಮಗಳು ಆರಂಭವಾಗಿವೆ. ಮುಂದೆ ಮಹಾರಾಷ್ಟ್ರ ಚುನಾವಣೆ ಇದೆ. ನಾವು ಜನರ ಪರ ಕಾರ್ಯಕ್ರಮ ಕೋಟ್ಟಿದ್ದೇವೆ. ಭಾವನೆ ಬೇಡ ಎಂದು ಬದುಕಿಗಾಗಿ ಕಾರ್ಯಕ್ರಮ ಕೊಟ್ಟಿದ್ದೇವೆ. ಜನರ ಭಾವನೆಯೇ ಇದು. ನಾನು ಇದನ್ನು ಮುಂದಿನ ರಾಜ್ಯಗಳ ಚುನಾವಣೆಗೆ ದಿಕ್ಸೂಚಿ ಎಂದು ಹೇಳುತ್ತಿಲ್ಲ. ಬದಲಾವಣೆಯೇ ಬೆಳಕು ದೇಶದಲ್ಲಿ ಬದಲಾವಣೆ ಗಾಳಿ ಬೀಸಿದೆ ಎಂದು ಹೇಳಿದರು.
ದೇಶದಲ್ಲಿ ಎಲ್ಲದಕ್ಕೂ ಒಂದೊಂದು ಕಾಲ ಇರುತ್ತೆ. 12 ವರ್ಷ ಎನ್ಡಿಎಗೆ ದೊಡ್ಡ ಅವಕಾಶ ಕೊಟ್ಟಿದ್ದಾರೆ. ಈಗ ಜನರು ಬದಲಾವಣೆ ಬಯಸಿದ್ದಾರೆ. ಅದರ ಫಲವಾಗಿ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಎಂದರು.
ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಹರ್ಯಾಣದಲ್ಲಿ (Haryana Election Results) ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಮುನ್ನಡೆ ಸಾಧಿಸಿದೆ. ಬೆಳಗ್ಗಿನ 9 ಗಂಟೆಯ ಟ್ರೆಂಡ್ ವೇಳೆ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಆದರೆ ಬೆಳಗ್ಗೆ 10 ಗಂಟೆಯ ಟ್ರೆಂಡ್ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 41 ಇತರರು 03 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.