ಯಲ್ಲಾಪುರ: ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರು ಅಪಘಾತಗಳಲ್ಲಿ 14 ಜನ ಮೃತಪಟ್ಟಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಘಟನೆ ಬಗ್ಗೆ ಟ್ವೀಟ್ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮೃತರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರದ ಭರವಸೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.