ನವದೆಹಲಿ: ರಾಜ್ಯದ 2 ಕಡೆ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಟ್ಟು 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ 3 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ.
ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನಬಹುದೇ..? ತಿಂದ್ರೆ ಏನಾಗುತ್ತದೆ.? ಇಲ್ಲಿದೆ ನೋಡಿ ಮಾಹಿತಿ
ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.