ನೆಲಮಂಗಲ: ಜಮೀನಿನ ಖಾತೆ ವಿಚಾರದಲ್ಲಿ ಹಣಕ್ಕೆ ಬೇಡಿಕೆ ಇಟ್ಟ
ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಕಾ ಬಲೆಗೆ ಬಿದ್ದಿರುವ ಘಟನೆ ಜರುಗಿದೆ.
ನೆಲಮಂಗಲ ತಾಲೂಕಿನ ಟಿ.ಬೇಗೂರು ಪಿಡಿಓ ಶೋಭಾರಾಣಿ ಲೋಕಾ ಬಲೆಗೆ ಬಿದ್ದ ಅಧಿಕಾರಿ. ಜಮೀನಿನ ಖಾತೆ ವಿಚಾರದಲ್ಲಿ 15 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ದೂರು ಆಧರಿಸಿ ಟ್ರ್ಯಾಪ್ ಮಾಡಿ ಲೋಕಾ ಟೀಮ್, ರೆಡ್ ಹ್ಯಾಂಡ್ ಆಗಿ ಭ್ರಷ್ಟ ಅಧಿಕಾರಿಯನ್ನು ಅರೆಸ್ಟ್ ಮಾಡಿದ್ದಾರೆ.
ಬ್ರೋಕರ್ ಮೂಲಕ 15 ಸಾವಿರ ಹಣ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.