ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೋವಿಡ್ ಸೋಂಕು ಧೃಡಪಟ್ಟಿದೆ. ಇನ್ನೂ ಇಬ್ಬರು ಸೋಂಕಿತರು ಮೃತಪಟ್ಟಿದ್ದು,126 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ. ಅದರಂತೆ ರಾಜ್ಯದಲ್ಲಿ ಇಂದು 270 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಸಕ್ರಿಯ ಪ್ರಕರಣಗಳು 7,271 ಸಂಖ್ಯೆ ದಾಖಲಾಗಿದೆ ಎಂದು ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
