ಬೆಂಗಳೂರು:-545 ಮಂದಿ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ 545 ಮಂದಿ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ಡಿಸೆಂಬರ್ ಒಳಗಾಗಿ ಭರ್ತಿ ಮಾಡಲಾಗುವುದು ಬಳಿಕ 402 ಪೋಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು.
ಬಳಿಕ 600 ಪಿಎಸ್ಐ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ವಿವರಿಸಿದರು.
ಒಟ್ಟಾರೆ 1547 ಪಿಎಸ್ಐ ಹುದ್ದೆಗಳನ್ನು ಮುಂದಿನ ಆರು ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದ ಅವರು ಇಲಾಖೆಗೆ ಹದಿನೈದು ಸಾವಿರ ಕಾನ್ಸ್ಟೆಬಲ್ ಅಗತ್ಯವಿದ್ದು, ಮೊದಲು ಮೂರು ಸಾವಿರ ಕಾನ್ಸ್ಟೆಬಲ್ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೂ ಆದಷ್ಟು ಶೀಘ್ರವಾಗಿ ಚಾಲನೆ ಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.