ಧಾರವಾಡ:- ಉದ್ಯೋಗ ಖಾತ್ರಿ ಅನುದಾನ ಶೇ 18 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,, ಉದ್ಯೋಗ ಖಾತ್ರಿ ಜಾಬ್ ಕಾರ್ಡ್ದಾರರ ಸಂಖ್ಯೆ ಹೆಚ್ಚಳವಾಗಿದ್ದರೂ ಈ ವರ್ಷ ಉದ್ಯೋಗ ಖಾತ್ರಿ ಅನುದಾನವನ್ನು ಶೇ 18 ಕಡಿತ ಮಾಡಿದೆ, ಕೇಂದ್ರ ಸರ್ಕಾರವನ್ನು ಕೇಳುವವರು ಇಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ದೂರಿದರು.
ದೇಶದಲ್ಲಿ 20 ಕೋಟಿ ಜನರು ಉದ್ಯೋಗ ಖಾತ್ರಿ ಯೋಜನೆಯನ್ನು ಅವಲಂಬಿಸಿದ್ದಾರೆ. ಪ್ರತಿ ವರ್ಷ ನರೇಗಾ ಅನುದಾನವನ್ನು ಹೆಚ್ಚಳ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಕಡಿಮೆಮಾಡಲಾಗಿದೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ನರೇಗಾ ವಿರುದ್ಧ ಮಾತನಾಡಿದ್ದರು. ಅವರಿಗೆ ಈ ಯೋಜನೆಗೆ ಬಗ್ಗೆ ಆಸಕ್ತಿ ಇಲ್ಲ’ ಎಂದು ಕುಟುಕಿದರು.
ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ಸಭೆ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧ ಇದ್ದೇನೆ ಎಂದು ಹೇಳಿದ್ದಾರೆ.