ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ. ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ. ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆ ಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು.
Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.