ದೇಶದ ರೈತರಿಗೆ ಕೇಂದ್ರ ಸರ್ಕಾರ ನೀಡುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಈಗಾಗಲೇ ದೇಶದ 11 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 3.46 ಲಕ್ಷ ಕೋಟಿ ರೂಪಾಯಿ ಹಣ ಜಮಾ ಆಗಿದೆ.
ಇದೀಗ ಪಿಎಂ ಕಿಸಾನ್ ಯೋಜನೆಯಲ್ಲಿ 19ನೇ ಕಂತಿನ 2000 ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಪ್ರಧಾನಮಂತ್ರಿ ಕಿಸಾನ್ ಯೋಜನೆಯಲ್ಲಿ ಇದುವರೆಗೂ 3.68 ಲಕ್ಷ ಕೋಟಿ ರೂಪಾಯಿ ರೈತರ ಖಾತೆಗಳಿಗೆ ಹಣ ಸಂದಾಯವಾಗಿದೆ.
ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2,000 ದಂತೆ ವರ್ಷಕ್ಕೆ ₹6,000 ಹಣ ಸಿಗುತ್ತದೆ. ಈ ಯೋಜನೆ ಆರಂಭವಾಗಿ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೈತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 24 ರಂದು ಬಿಹಾರದ ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ PM ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ ಮಾಡಿದ್ರು.
ಈ ಮೂಲಕ ದೇಶದ 9.8 ಕೋಟಿ ರೈತ ಕುಟುಂಬಗಳಿಗೆ ತಲಾ ₹2,000 ರಂತೆ ಒಟ್ಟು ₹22,000 ಕೋಟಿ ಹಣ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಿದೆ. ಈ ಮೊದಲೇ ಈ ಕುರಿತಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.
ಯೋಜನೆಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ
ನೀವು ಯೋಜನೆಗೆ ನೊಂದಾಯಿಸಿದ್ದು ಈ 19ನೇ ಕಂತಿನ ಹಣ ನಿಮ್ಮ ಕೈಸೇರುತ್ತದೋ ಇಲ್ಲವೋ ಎಂದು ಆತಂಕಗೊಂಡಿರಬಹುದು. ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಎಂಬುದನ್ನು ತಿಳಿದುಕೊಳ್ಳಲು ಸಾಧ್ಯ.
ಮೊದಲಿಗೆ ಪಿಎಂ ಕಿಸಾನ್ ಯೋಜನೆಯ ವೆಬ್ಸೈಟ್ಗೆ ಹೋಗಿರಿ: pmkisan.gov.in/
ಮುಖ್ಯಪುಟದಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಸೆಕ್ಷನ್ ಕಾಣುತ್ತೀರಿ. ಇಲ್ಲಿ ‘ಬೆನಿಫಿಷಿಯರಿ ಲಿಸ್ಟ್’ ಅನ್ನು ಕ್ಲಿಕ್ ಮಾಡಿ.
ನಂತರ, ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗು ಊರನ್ನು ಆಯ್ದುಕೊಂಡರೆ, ಆ ಊರಿನಲ್ಲಿರುವ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಕಾಣಬಹುದು. ಇದರಲ್ಲಿ ನಿಮ್ಮ ಹೆಸರಿದೆಯಾ ಗಮನಿಸಿ ನೋಡಿ.
ಯೋಜನೆಗೆ ನೊಂದಾಯಿಸಿ: ನೀವು ಈ ಯೋಜನೆಗೆ ಅರ್ಹರಾಗಿದ್ದು, ಇನ್ನೂ ನೊಂದಾಯಿಸದಿದ್ದರೆ ಈಗಲೂ ಅವಕಾಶ ಇದೆ. ಇದೇ ವೆಬ್ಸೈಟ್ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್ನಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕ್ಲಿಕ್ ಮಾಡಿ ಅಲ್ಲಿಂದ ನೀವು ಯೋಜನೆಗೆ ನೊಂದಾಯಿಸಬಹುದು.