ಬೆಂಗಳೂರು:- ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನಗರದ ಹಲವೆಡೆ ಸಾಧಾರಣ ಮಳೆ ಆಗಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ.
ನಾಳೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.
ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಇದಾದ ನಂತರ ಡಿಸೆಂಬರ್ 19ರಿಂದ ಕರಾವಳಿ ಭಾಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.