ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎರಡು ದಿನ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮತ್ತು ನಾಳೆ (ನ.19, 20) ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು 12 ಗಂಟೆಗೆ ಮೈಸೂರಿಗೆ ಆಗಮಿಸಲಿರುವ ಬಿ ವೈ ವಿಜಯೇಂದ್ರ, 1.50ಕ್ಕೆ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ ನೀಡಲಿದ್ದಾರೆ. 2.30ಕ್ಕೆ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. 3.40ಕ್ಕೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡುತ್ತಾರೆ.
ಸಂಜೆ 4 ಗಂಟೆಗೆ ನಾಡದೇವತೆ ತಾಯಿ ಚಾಮುಂಡೇಶ್ವರಿ ಸನ್ನಿದಾನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುತ್ತಾರೆ. 5.10ಕ್ಕೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಕಾರ್ಯಕರ್ತರ ಸಭೆ, ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.