ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಅನುಭವವಾಗುತ್ತಿದ್ದು, ಬೀದರ್, ವಿಜಯಪುರ, ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ತೀವ್ರ ಶೀತ ಮತ್ತು ಮಂಜು ಆವರಿಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ತಾಪಮಾನ 15 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಹವಾಮಾನ ಇಲಾಖೆ ಜಿಲ್ಲಾವಾರು ತಾಪಮಾನದ ಮುನ್ಸೂಚನೆಯನ್ನು ನೀಡಿದೆ.
ಈ ರಾಶಿಯವರು ಬೆಳ್ಳಿ ಧರಿಸಿದರೆ ಜೀವನದಲ್ಲಿ ಕಷ್ಟಗಳು ಕಷ್ಟ ಕಟ್ಟಿಟ್ಟ ಬುತ್ತಿ!
ಮುಂದಿನ ಎರಡು ದಿನ ಉತ್ತರ ಕರ್ನಾಟಕದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೇ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಆವರಿಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಮತ್ತು ಕನಿಷ್ಠ 16, ಬೀದರ್ನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 13, ಕಲಬುರಗಿ ಗರಿಷ್ಠ 31 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಮಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 21, ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 15, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ