ಬೆಂಗಳೂರು:- ರಾಜ್ಯದಲ್ಲಿ 2 ಲಕ್ಷ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು ಎರಡು ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಗಳನ್ನು ಮೊದಲು ತೆರವುಗೊಳಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೂ ಮೊದಲು ಅರಣ್ಯ ಭೂಮಿ ಒತ್ತುವರಿ ಮಾಡಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ’ ಎಂದರು.
ಸುಮಾರು 13,155 ಪ್ರಕರಣಗಳಲ್ಲಿ 31,864 ಎಕರೆ ಭೂಮಿ ಇದ್ದು, ಈ ಪೈಕಿ ಸುಮಾರು 7 ಸಾವಿರ ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ. ಬಾಕಿ ಇರುವ ಪ್ರಕರಣಗಳನ್ನು ಆದಷ್ಟು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.