ಬೆಂಗಳೂರು:- ರಾಜ್ಯ ಸರ್ಕಾರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ. ಸರ್ಕಾರ ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಇಂದು ರೈತರ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ. ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷದ ಭೀಕರ ಬರಗಾಲದಿಂದ ರಾಜ್ಯದ ರೈತರು 30 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಮತ್ತು ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೃಷ್ಣ ಬೈರೇಗೌಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬರಗಾಲದಿಂದ ರಾಜ್ಯ ತತ್ತರಿಸಿದೆ. ಹೀಗಾಗಿ 18,177 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.