ಬೆಂಗಳೂರು:- ಕರ್ನಾಟಕದಲ್ಲಿ ಅನರ್ಹ ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಮಾಡಿ ರದ್ದು ಮಾಡಲಾಗುತ್ತಿದೆ.
ವಿರಾಟ್ ಕೊಹ್ಲಿ ಕುಡಿಯುವ ನೀರಿನ 1 ಲೀಟರ್ ಬೆಲೆ ಎಷ್ಟು ಗೊತ್ತಾ!? ಕಿಂಗ್ ಅಂತ ಸುಮ್ನೆ ಹೇಳ್ತಾರಾ!
ಇದರ ಜೊತೆಯಲ್ಲೇ ಇದೀಗ ಕರ್ನಾಟಕ ಜನತೆಗೆ ಬಿಗ್ ಶಾಕಿಂಗ್ ಸುದ್ದಿ ಹೊರ ಬಿದ್ದಿದ್ದು, ರಾಜ್ಯದಲ್ಲಿ ಬರೋಬ್ಬರಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ದಾರರು ಇದ್ದಾರೆ ಎಂಬ ಸತ್ಯಸಂಗತಿ ಬಯಲಾಗಿದೆ.
ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳ ರದ್ದಾಗಲಿದೆಯೇ ಎಂಬ ಅನುಮಾನ ಈಗ ಮೂಡಿದೆ.
ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿರುವ ಮಾಹಿತಿ ಸಿಕ್ಕಿದೆ. ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ.
ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ.
ಏತನ್ಮಧ್ಯೆ, ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ಅರ್ಹ ಬಿಪಿಎಲ್ ಕಾರ್ಡ್ದಾರರು ಆತಂಕ ಆತಂಕಕ್ಕೊಳಗಾಗುವುದು ಬೇಡ ಎಂದಿದ್ದಾರೆ.