ವಾಷಿಂಗ್ಟನ್: ಶ್ರೀಮಂತ ಉದ್ಯಮಿಯಾಗಿರುವ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಇದರಿಂದ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಅಧಿಕಾರಿಗಳು ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ಗೂ (ಅಂದಾಜು 2238 ಕೋಟಿ ರೂ.) ಹೆಚ್ಚು ಲಂಚದ ಭರವಸೆ ನೀಡಿದ್ದಾರೆ ಎಂದು ಆರೋಪಿಸಿದೆ.
ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್ಇಸಿ ನ್ಯೂಯಾರ್ಕ್ನ ಡಿಸ್ಟ್ರಿಕ್ಟ್ ಕೋರ್ಟ್ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.
ರೈತರೇ ಗಮನಿಸಿ.. ಅಣಬೆ ಕೃಷಿ ಮಾಡುವರಿಗೆ ಶೆಡ್ ನಿರ್ಮಾಣಕ್ಕಾಗಿ ಶೇ.50 ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ
ನ್ಯೂಯಾರ್ಕ್ ಕೋರ್ಟ್ ಗೌತಮ್ ಅದಾನಿ ಮತ್ತು ಸಾಗರ್ ಅದಾನಿಗೆ ಬಂಧನ ವಾರೆಂಟ್ ಹೊರಡಿಸಿದೆ. ಆ ವಾರೆಟ್ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್ಗಳು ಯೋಜಿಸಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರ ವಿರುದ್ಧ ವಂಚನೆ ಪಿತೂರಿ ಆರೋಪ ಮಾಡಲಾಗಿದೆ.
ಸೋಲಾರ್ ಎನರ್ಜಿ ಗುತ್ತಿಗೆ ಪಡೆಯಲು ಲಂಚ ನೀಡಿದ ಆರೋಪ
ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.