ಬಳ್ಳಾರಿ: ಬಾಣಂತಿಯರ ಸಾವಿನ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ಹರಿಹಾಯ್ದಿವೆ. ಬಾಣಂತಿಯರ ಸಾವಿಗೆ ಕಾರಣವೇನು ಎಂಬುವುದನ್ನು ತಿಳಿಯಲು ಸರ್ಕಾರ ತಜ್ಞರ ಸಮಿತಿ ರಚಿಸಿತ್ತು. ಡಾ. ಸವಿತಾ, ಡಾ. ಭಾಸ್ಕರ್ ಮತ್ತು ಡಾ. ಹರ್ಷ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿದ್ದು,
ಈ ಕೂಡಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾವಿಗೆ ಏನು ಕಾರಣ ಎಂದು ತನಿಖೆ ನಡೆಸಬೇಕು ಎಂದು ಸೂಚಿಸಿತ್ತು. ತನಿಖೆ ಬಳಿಕ ಸರ್ಕಾರಕ್ಕೆ ತುರ್ತು ವರದಿಯನ್ನ ಸಲ್ಲಿಕೆ ಮಾಡಬೇಕೆಂದು ಸೂಚನೆ ನೀಡಿತ್ತು. ತನಿಖೆ ನಡೆಸಿದ ತಂಡ ಸಾವಿಗೆ ಕಾರಣವೇನು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ.
GST Council Meetings: ಪಾಪ್ ಕಾರ್ನ್ ಮೇಲೆ 3 ರೀತಿಯ GST! 20ರೂ ಪ್ಯಾಕೆಟ್ ಬೆಲೆ ಎಷ್ಟು ಹೆಚ್ಚಾಗಲಿದೆ ಗೊತ್ತಾ.?
ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ಸಾವಾಗಿರುವ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಸಲ್ಲಿಸಿದ ಆಡಿಟ್ ರಿಪೋರ್ಟ್ನಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಏಪ್ರಿಲ್ನಿಂದ ಈವರೆಗೂ 23 ಬಾಣಂತಿಯರ ಸಾವಾಗಿದೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರ ಸಾವಿನ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಹೆರಿಗೆ ಸಂದರ್ಭದಲ್ಲಿ ಬಾಣಂತಿಯರಿಗೆ ಅಪೌಷ್ಟಿಕತೆ, ಅನಿಮಿಯಾ ಇತರೆ ಕಾಯಿಲೆಗಳು ಕಾಡುತ್ತಿವೆ. ಹೀಗಾಗಿ ಸಿಜೇರಿಯನ್ ಆಗುವ ಬಾಣಂತಿಯರೇ ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಬಾಣಂತಿಯರ ಸಾವಿಗೆ ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಹೇಳಿದ್ದಾರೆ.