ಮಂಡ್ಯ : ಮಂಡ್ಯದಲ್ಲಿ ಸತತ 24 ಗಂಟೆಗಳ ಕಾಲ ರಕ್ತದಾನ ಶಿಬಿರ ನಡೆಯಲಿದ್ದು, ಹೊಸ ದಾಖಲೆ ಬರೆಯಲಿದೆ. ಮಂಡ್ಯದ ಜೀವಧಾರ ಟ್ರಸ್ಟ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಜ.23ರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿರುವ ರಕ್ತ ದಾನ ಶಿಬಿರ ಜ.24ರ ಬೆಳಗ್ಗೆ 8ಗಂಟೆ ವರೆಗೆ ನಿರಂತರವಾಗಿ ನಡೆಯಲಿದೆ. ಇನ್ನೂ ರಕ್ತದಾನ ಶಿಬಿರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುತ್ತಿದ್ದಾರೆ.
ವಿದ್ಯಾರ್ಥಿಗಳು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಎಲ್ಲಾ ವಯೋಮಾನದವರು ಸಹ ರಕ್ತದಾನ ಮಾಡಿದ್ದಾರೆ. ಇನ್ನೂ ಮಂಡ್ಯ ಜಿಲ್ಲಕಾಧಿಕಾರಿಗಳಾದ ಡಾ.ಕುಮಾರ್ ಇದೇ ಮೊದಲ ಬಾರಿಗೆ ರಕ್ತದಾನ ಮಾಡಿದ್ದಾರೆ. ಇವರ ಜೊತೆಗೆ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ಕೂಡ ರಕ್ತದಾನ ಮಾಡಿದರು. ಇನ್ನೂ ಇದೇ ವೇಳೆ ಮಾತನಾಡಿದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಇದೇ ಮೊದಲ ಬಾರಿಗೆ ರಕ್ತದಾನ ಮಾಡಿದ್ದೇನೆ. ಕಲ್ಪನೆಯಿಂದ ಇಷ್ಟು ದಿನ ರಕ್ತದಾನ ಮಾಡಿರಲಿಲ್ಲ. ಇಂತಹ ರಕ್ತದಾನ ಶಿಬಿರಗಳು ಹೆಚ್ಚಾಗಿ ನಡಿಬೇಕು. ಜೀವಧಾರೆ ಟ್ರಸ್ಟ್ ಉತ್ತಮ ಕೆಲಸ ಮಾಡ್ತಿದೆ. ಎಲ್ಲರೂ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು