ಬೆಂಗಳೂರು:- ಕರ್ನಾಟಕದಲ್ಲಿಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರು ಒಂದರಲ್ಲೇ 23 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್ಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, 85 ಜನರು ಹೋಂ ಐಸೋಲೇಷನ್ನಲ್ಲಿದ್ದಾರೆ. ಇನ್ನುಳಿದಂತೆ 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಶೇಕಡಾ 1.6 ರಷ್ಟು ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗಿದೆ.
ಕೇರಳದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದಂತೆ ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ವರ್ಷದ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಂದು ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್ಪರ್ಟ್ ತಂಡವು ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಫೆಬ್ರವರಿ ಕೊನೆಯ ವಾರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.