ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆ ಸ್ಕಾಲರ್ಶಿಪ್ ತಂದೆ ಇಲ್ಲದ ಎಲ್ಲಾ ಮಕ್ಕಳಿಗೂ ಅನ್ವಯವಾಗುವುದಿಲ್ಲ. ನಿರ್ದಿಷ್ಟ ಮಾನದಂಡಗಳ ಮೂಲಕ ಮಾತ್ರ ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಾಗುತ್ತದೆ.
ಈ ಯೋಜನೆಯ ಮೂಲಕ ತಂದೆಯಿಲ್ಲದ ಮಕ್ಕಳ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 24,000 ರೂಪಾಯಿಗಳ ಸ್ಕಾಲರ್ಶಿಪ್ ಸೌಲಭ್ಯವಿರುತ್ತದೆ, ಆದರೆ ಈ ವಿಷಯದ ಬಗ್ಗೆ ಅನೇಕ ಜನರಿಗೆ ತಿಳಿದೇ ಇಲ್ಲ. ಆದ್ದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದಂತಹ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಈ ತಕ್ಷಣ ಅರ್ಜಿಯನ್ನು ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣದ ಮುಖಾಂತರ ಹರಿದಾಡುತ್ತಿದ್ದು, ಈ ಸುದ್ದಿಯು “ಸುಳ್ಳುಸುದ್ದಿ”ಯಾಗಿಗಿದೆ.
ಮಹಿಳೆಯರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಸಿಗಲಿದೆ 11,000 ರೂ. ಸಹಾಯ ಧನ
ಈ ಯೋಜನೆಯಡಿಯಲ್ಲಿ ನಿರ್ದಿಷ್ಟ ಮಾನದಂಡಗಳು ಅನ್ವಯವಾಗುವ ಮಕ್ಕಳಿಗೆ ಮಾತ್ರವೇ ಸ್ಕಾಲರ್ಶಿಪ್ ಸಿಗಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧ್ಯಕ್ಷರು ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.
ಈ ಯೋಜನೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳಿಂದ(ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದರೆ ಹಾಗೂ ವಿಸ್ತ್ರತ ಕುಟುಂಬದಲ್ಲಿ ಜೀವಿಸುತ್ತಿದ್ದರೆ, ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು, ಕಾರಾಗೃಹದಲ್ಲಿರುವ ಪೋಷಕರ ಮಕ್ಕಳು, ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿ ಬರುವ ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ ಮಕ್ಕಳು, ಪೋಷಕರು ಗಂಭೀರ ಸ್ವರೂಪದ ಕಾಯಿಲೆಯ(ಮಾರಣಾಂತಿಕ ಕಾಯಿಲೆ) ಸಂತ್ರಸ್ಥರ ಮಕ್ಕಳು, ಪೋಕ್ಸೋ ಸಂತ್ರಸ್ಥ ಮಕ್ಕಳು, ಬಾಲಸ್ವರಾಜ್ ಪೋರ್ಟಲ್ನಲ್ಲಿ ನೋಂದಾಯಿಸಿದ ಮಕ್ಕಳು, ಬಾಲ ಕಾರ್ಮಿಕರು, ಬಾಲ್ಯ ವಿವಾಹ ಸಂತ್ರಸ್ತ ಮಕ್ಕಳು, ಕಳ್ಳ ಸಾಗಾಣೆಗೊಳಗಾದ ಮಕ್ಕಳು, ಯಾವುದೇ ನೈಸರ್ಗಿಕ ವಿಕೋಪಕ್ಕೆ ಒಳಗಾದವರು, ಹೆಚ್ಐವಿ/ಏಡ್ಸ್ ಬಾಧಿತ (ಪೀಡಿತ) ಮಕ್ಕಳು, ದೈಹಿಕ ಅಂಗವಿಕಲತೆಯುಳ್ಳ ಮಕ್ಕಳು, ಬಾಲ ಬಿಕ್ಷುಕರು ಅಥವಾ ಬೀದಿಬದಿ ಮಕ್ಕಳು, ಚಿತ್ರಹಿಂಸೆ ಅಥವಾ ನಿಂದನೆ ಅಥವಾ ಬೆಂಬಲ ಮತ್ತು ಪುನರ್ವಸತಿ ಅಗತ್ಯವಿರುವ ಶೋಷಿತ ಮಕ್ಕಳು, ಅನಾಥ, ಕಾಣೆಯಾದ ಅಥವಾ ಓಡಿಹೋದ ಮಕ್ಕಳು, ನಿರ್ಗತಿಕರಾಗುವುದು. ಸಂಕಷ್ಟಕ್ಕೆ ಈಡಾಗುವ ಸಂಭವವಿರುವ ಕುಟುಂಬದ ತಾಯಿ ಕುಟುಂಬದಿಂದ ಪರಿತ್ಯಜಿಸಲ್ಪಟ್ಟಿದ್ದರೆ ಅಥವಾ ವಿಧವೆ. ವಿಚ್ಛೇದಿತೆ ಮಗು ಜೈವಿಕ ಕುಟುಂಬದಲ್ಲೇ(ವಿಸ್ತ್ರತ ಕುಟುಂಬ ಹಾಗೂ ರಕ್ತ ಸಂಬಂಧ ಒಳಗೊಂಡಂತೆ) ಮುಂದುವರೆಯುವ ಮಕ್ಕಳಿಗೆ ಈ ಯೋಜನೆಯ ಪ್ರಯೋಜನ ಲಭ್ಯ.
ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಿಮ್ಮ ಹತ್ತಿರದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೋಳ ಶಿವಮೊಗ್ಗ, ದೂ. ಸಂಖ್ಯೆ:08182-295709 ಸಂಪರ್ಕಿಸಬಹುದು ಎಂದು ಶಿವಮೊಗ್ಗದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಈ ಪ್ರಕಟಣೆಯ ಮೂಲಕ ಮಾಹಿತಿಯನ್ನು ತಿಳಿಸಿದ್ದಾರೆ.