ಗದಗ :ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಆಡಿಟೋರಿಯಂದಲ್ಲಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ್ ಅವರು ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿದ್ರು.
ನಮ್ಮ ಮೆಟ್ರೋದ ಹಳದಿ ಮಾರ್ಗ ಜ.6 ರಂದು ಶುರುವಾಗುತ್ತಾ!? BMRCL ಹೇಳಿದ್ದೇನು?
ಇದೇ ವೇಳೆ ಮಾತನಾಡಿದ ಅವರು ಗದಗ ಜಿಲ್ಲೆಯಲ್ಲಿ 2023-2024 ರಲ್ಲಿ 2478 ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಣಿ ಮಾಡಿಸಿದ್ದು ಅವರಿಗೆ 4.12 ಕೋಟಿ ರೂ. ಮೊತ್ತವನ್ನು ಡಿ.ಬಿ.ಟಿ. ಮೂಲಕ ಸಂದಾಯಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿ.ಪಂ. ಮಾಜಿ ಅಧ್ಯಕ್ಷ ಸಿದ್ಧು ಪಾಟೀಲ್, ಬಸವರಾಜ ಕಡೆಮನಿ ಸೇರಿದಂತೆ ಇತರರು ಇದ್ದರು.