ಮುಂಬೈ: ಹದಿನೈದು ವರ್ಷಗಳ ಹಿಂದೆ ಈ ದಿನ (26/11/2008) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Mumbai Terror Attacks) 166 ಜನ ಬಲಿಯಾಗಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಭೀಕರ ದಾಳಿ ನಡೆದು ಅದರ ತೀವ್ರತೆ ಇಂದಿಗೂ ಕಡಿಮೆಯಾಗಿಲ್ಲ. ಕುಟುಂಬಗಳ ರೋಧನೆ, ದಾಳಿಯಿಂದ ಕಲಿತ ಪಾಠಗಳೂ ಇಂದಿಗೂ ಮರೆತಿಲ್ಲ.
ಮುಂಬೈ ದಾಳಿಯ ನಂತರ ಪಾಕಿಸ್ತಾನವು ಭಾರತದ (India vs Pakistan) ಪಾಲಿಗೆ ಶತ್ರು ರಾಷ್ಟ್ರವಾಗಿಯೇ ಉಳಿದುಬಿಟ್ಟಿದೆ. ಪ್ರತಿ ವರ್ಷವೂ ನವೆಂಬರ್ 26ನೇ ತಾರೀಖು ಬಂದಾಗೆಲ್ಲಾ ಇಡೀ ದೇಶದ ಜನ ಈ ದಾಳಿಯನ್ನ ನೆನೆದು ಶತ್ರು ರಾಷ್ಟ್ರಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. 2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (Lashkar-e-Taiba) ಭಯೋತ್ಪಾದಕರು ಪ್ರವೇಶಿಸಿದ್ದರು.
Namma Metro: ಇನ್ಮುಂದೆ ಮೆಟ್ರೋದಲ್ಲೂ ನಡೆಯಲಿದೆ ಶೂಟಿಂಗ್ – ಬಿಎಂಆರ್ಸಿಎಲ್ ಗ್ರೀನ್ ಸಿಗ್ನಲ್
60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್ಗಳಲ್ಲಿ ದಾಳಿ ನಡೆಸಲಾಗಿತ್ತು. ಈ ಸ್ಥಳಗಳಿಗೆ ಯುರೋಪಿಯನ್ನರು, ಭಾರತೀಯರು ಮತ್ತು ಯಹೂದಿಗಳು ಆಗಾಗ್ಗೆ ಭೇಟಿ ನೀಡುವುದರಿಂದ ಗರಿಷ್ಠ ಪ್ರಮಾಣದಲ್ಲಿ ಜನಸಂದಣಿ ಸೇರುತ್ತಿದ್ದರು.
ಇದರ ಬಗ್ಗೆ ಸಮೀಕ್ಷೆ ನಡೆಸಿದ ನಂತರ ಪೂರ್ವನಿಯೋಜಿತ ದಾಳಿ ನಡೆಸಲಾಗಿತ್ತು. ಅಂದು ನಡೆದ ದಾಳಿಗೆ ನೂರಾರು ಆಮಾಯಕ ಜೀವಗಳು ಪ್ರಾಣತೆತ್ತವು. ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಭಯೋತ್ಪಾದಕರ ಪೈಕಿ 9 ಮಂದಿ ಛತ್ರಪತಿ ಶಿವಾಜಿ ಟರ್ಮಿನಲ್ ರೈಲ್ವೇ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿದ್ದರು. ಬದುಕುಳಿದಿದ್ದ ಒಬ್ಬ ಪಾಕಿಸ್ತಾನಿ ಭಯೋತ್ಪಾದಕ ‘ಮೊಹಮ್ಮದ್ ಅಜ್ವಲ್ ಅಮೀರ್ ಕಸಬ್’ಗೆ 2010ರಲ್ಲಿ ಮರಣದಂಡನೆ ವಿಧಿಸಿ.
2012ರಲ್ಲಿ ಪುಣೆಯಲ್ಲಿ ಗಲ್ಲಿಗೇರಿಸಲಾಯಿತು. 2008ರ ಈ ದುರಂತಕ್ಕೆ 15 ವರ್ಷಗಳು ಕಳೆದರೂ ಘಟನೆಯ ಭೀಕರತೆ, ಮೃತಪಟ್ಟವರ ನೆನಪು, ಕುಟುಂಬಗಳ ರೋಧನೆ ಇನ್ನೂ ಜೀವಂತ, ಕಲಿತ ಪಾಠಗಳು ಜಾಗತಿಕ ಭದ್ರತೆಗೆ ನಿರ್ಣಾಯಕವಾಗಿವೆ. ಈ ವರ್ಷ ದುರಂತ ಭಯೋತ್ಪಾದನಾ ದಾಳಿಯ 15ನೇ ವಾರ್ಷಿಕೋತ್ಸವ ಗುರುತಿಸುವ ಮೂಲಕ, ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೊಯ್ಯಾ(ಎಲ್ಇಟಿ) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತ ಸರ್ಕಾರದ ಯಾವುದೇ ಮನವಿ ಇಲ್ಲದೇ ಈ ಕ್ರಮ ಕೈಗೊಳ್ಳಲಾಗಿದೆ.