ಬೆಂಗಳೂರು:- ಕರ್ನಾಟಕದಲ್ಲಿ ಇಂದು 298 ಹೊಸ ಕೊವಿಡ್ ಕೇಸ್ ಪತ್ತೆ ಆಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ನಗರದಲ್ಲಿ ಇಂದು ಒಂದು ದಿನೇ 172 ಕೊವಿಡ್ ಕೇಸ್ ಪತ್ತೆ ಹಚ್ಚಲಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.82ರಷ್ಟಿದೆ. 229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.
ರಾಜ್ಯದಲ್ಲಿ 24 ಗಂಟೆಯಲ್ಲಿ 7,791 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 1240 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿವೆ.
ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3, ತುಮಕೂರು 5, ಉತ್ತರ ಕನ್ನಡ 4 ಮತ್ತು ವಿಜಯನಗರ 5 ಕೊವಿಡ್ ಕೇಸ್ ಪತ್ತೆ ಆಗಿವೆ.