ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು,
ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬ ಹುದಾಗಿದೆ.
Gruhalakshmi Scheme: ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ..!
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಪರಿಶೀಲನೆ ಹೇಗೆ?
- karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
- ಮುಖಪುಟದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
- ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ಕ್ಲಿಕ್ ಮಾಡಿ
- ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಕುರಿತು ಆಯ್ಕೆ ಮಾಡಿಕೊಳ್ಳಿ
- ಕ್ಲಿಕ್ ಮಾಡಿದ ಬಳಿಕ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಬಳಿಕ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.