ಬೆಂಗಳೂರು:- ಕರ್ನಾಟಕದ ಹಲವೆಡೆ ಮಾರ್ಚ್ 22 ರಿಂದ ಮೂರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.