ಬೆಂಗಳೂರು: ನಗರದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಗುಡುಗು ಗಾಳಿ ಸಹಿತ ಮೂರು ದಿನಗಳ ಕಾಲ ಭಾರಿ ಮಳೆಯಾಗುತ್ತದೆ ಎಂದು ಹೇಳಿದೆ. ತಗ್ಗುಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಅಂಡರ್ಪಾಸ್ಗಳಲ್ಲಿ ನೀರು ನಿಂತು ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆಯಾಗುತ್ತಿದ್ದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಬಿಬಿಎಂಪಿಯ ವಾರ್ ರೂಂಗೆ ಧಿಡೀರನೆ ಭೇಟಿ ನೀಡಿದ್ದರು
ಹಾಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಧಾರಾಕಾರ ಮಳೆಯಿಂದ ನಗರದಲ್ಲಿ ನಾಲ್ಕು ಮರಗಳು ಧರೆಗೆ ಉರುಳಿವೆ. ಬೆಂಗಳೂರು ಪೂರ್ವ ವಲಯ-1, ಮಹದೇವಪುರ ವಲಯ-1, ಬೆಂಗಳೂರು ದಕ್ಷಿಣ ವಲಯದಲ್ಲಿ 2 ಮರಗಳು ಧರೆಗುರುಳಿವೆ. ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಬಂದಿತ್ತು.
![](https://ainlivenews.com/wp-content/uploads/2024/01/Ad-Banner-copy-scaled.jpg)