ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅತೃಪ್ತರ ಮನವೊಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಕಸರತ್ತು: ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸದ್ಯ ಮೋಡ ಕವಿದ ವಾತಾವರಣ ಇದ್ದು, ನಿನ್ನೆ ರಾತ್ರಿ ಮಳೆಯಾಗಿತ್ತು.