ಚಿಕ್ಕಮಗಳೂರು:- ಜಿಲ್ಲೆಯ 3 ತಾಲೂಕುಗಳು ನಾಳೆ ಬಂದ್ ಆಗಲಿದೆ.
ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂರು ತಾಲೂಕಿನಲ್ಲಿ ವಿರೋಧ ವ್ಯಕ್ತವಾಗಿದೆ. ಕೊಪ್ಪ, NR ಪುರ ತಾಲೂಕು ಒಳಗೊಂಡ ಶೃಂಗೇರಿ ಕ್ಷೇತ್ರ ಬಂದ್ ಗೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿದೆ. ಈ ಬಂದ್ಗೆ ಬಿಜೆಪಿ, ಜೆಡಿಎಸ್ ಸೇರಿದಂತೆ ಸರ್ವ ಸಂಘಟನೆಗಳ ಬೆಂಬಲ ವ್ಯಕ್ತವಾಗಿದ್ದು, ನಾಳೆ ಶೃಂಗೇರಿ ಕ್ಷೇತ್ರ ಬಂದ್ ನಡೆಸಲು ಸಿದ್ದತೆ ನಡೆಸಲಾಗಿದೆ.
ರಾಜಕಾಲುವೆಗಳ ಒತ್ತುವರಿ ತೆರವು ಮಾಡಲೇಬೇಕು: ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ!
ಮಲೆನಾಡು ಭಾಗದಲ್ಲಿ ಗುಡ್ಡ, ಭೂ ಕುಸಿತ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸಿದ್ದು, ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವಿಗೆ ಆದೇಶ ನೀಡಿ. ಒಂದು ತಿಂಗಳೊಳಗೆ ಒತ್ತುವರಿ ತೆರವು ಮಾಡಲು ಜಿಲ್ಲಾಡಳಿತ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒತ್ತುವರಿಯಾಗಿದ್ದ ನೂರಾರು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ಮಲೆನಾಡಿನಲ್ಲಿ ವಿರೋಧ ವ್ಯಕ್ತವಾಗಿದೆ.
ಕಂದಾಯ, ಅರಣ್ಯ ಭೂಮಿ ಒತ್ತುವರಿ ತೆರವು ಸಂಬಂಧಿಸಿದಂತೆ ಜಿಲ್ಲಾಡಳಿತ, ಅರಣ್ಯ ಇಲಾಖೆಗೆ ಗೊಂದಲವಿದ್ದು, ಕಂದಾಯ, ಅರಣ್ಯ ಭೂಮಿ ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೇಗೆ ಸರ್ಕಾರ ಈ ಹಿಂದೆ ಆದೇಶ ನೀಡಿತ್ತು. ಆದ್ರೆ, ಜಂಟಿ ಸರ್ವೇ ನಡೆಸದೆ ಅರಣ್ಯ ಭೂಮಿ ಒತ್ತುವರಿ ತೆರವಿಗೆ ವಿರೋಧ ವ್ಯಕ್ತವಾಗಿದೆ.