ಹುಬ್ಬಳ್ಳಿ: ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದೆಂದು ನಂಬಿಸಿದ ಅಪರಿಚಿತರು, ಇಲ್ಲಿಯ ಭವಾನಿ ನಗರದ ಮಹಿಳೆಯೊಬ್ಬರಿಂದ ಬರೋಬ್ಬರಿ 32.11 ಲಕ್ಷ ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ವಾಟ್ಸ್ಆ್ಯಪ್ನಲ್ಲಿ ಮಹಿಳೆಯನ್ನು ಸಂಪರ್ಕಿಸಿದ ಅಪರಿಚಿತರು, ಲಾಭ ಗಳಿಸುವುದಕ್ಕೆ ಸಂಬಂಧಿಸಿದಂತೆ ವಾಟ್ಸ್ ಆ್ಯಪ್ಗೆ ಟೆಲಿಗ್ರಾಂ ಲಿಂಕ್ ನಂತರ ಮಾಹಿತಿ ಪಡೆದುಕೊಂಡಿದ್ದಾರೆ. ವಿವಿಧ 11 ಬ್ಯಾಂಕ್ ಖಾತೆಗಳಿಂದ 32,11,659 ರೂ. ಆನ್ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.