ಬೆಂಗಳೂರು ಗ್ರಾಮಾಂತರ :- 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ.
ಏ.26 ರಂದು ಮೊದಲ ಹಂತ ಮತ್ತು ಮೇ.07 ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
ಮತದಾನ ಹೆಚ್ಚಿಸುವ ಸಲುವಾಗಿ ಹಾಗೂ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಸಲುವಾಗಿ ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ 04 ಯುವ ಮತಗಟ್ಟೆಗಳು, 20 ಮಹಿಳಾ ಮತಗಟ್ಟೆಗಳು(ಸಖಿ), ೦4 ವಿಶೇಷ ಚೇತನ ಮತಗಟ್ಟೆಗಳು, 04 ವಿಷಯಾಧಾರಿತ ಮತಗಟ್ಟೆಗಳು , 04 ಮಾದರಿ ಮತಗಟ್ಟೆಗಳು ಸೇರಿ ಒಟ್ಟು 36 ವಿಶೇಷ ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ