ಬೆಂಗಳೂರು: ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿರುವ 3,673 ಪೌರಕಾರ್ಮಿಕರ ಸೇವೆಗಳನ್ನು ಕಾಯಂಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಬೆಂಗಳೂರಿನಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಸರ್ಕಾರದ ಅಡಿಯಲ್ಲಿ 17,000 ರಿಂದ 28,950 ರೂಪಾಯಿ ವರೆಗಿನ ವೇತನ ಶ್ರೇಣಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚು ವರ್ಷಗಳ ಕಾಲ ಕೆಲಸ ಮಾಡಿದ ವ್ಯಕ್ತಿಗೆ ಆದ್ಯತೆ ನೀಡಲಾಗುತ್ತದೆ. ಅವರು ಕನಿಷ್ಠ ಎರಡು ವರ್ಷಗಳವರೆಗೆ ಕೆಲಸ ಮಾಡಿದ ಮತ್ತು ವೇತನ ಪಡೆದಿದ್ದಕ್ಕಾಗಿ ಪುರಾವೆಗಳನ್ನು ಒದಗಿಸಬೇಕು” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದ ಎಂಟು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಒಟ್ಟು 18,000 ಪೌರಕಾರ್ಮಿಕರ ಪೈಕಿ 3,673 ಮಂದಿಯನ್ನು ಜೇಷ್ಠತಾ ಪಟ್ಟಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿತ್ತು. ಅಭ್ಯರ್ಥಿಗಳನ್ನು ಅನುಭವದ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಮತ್ತು ಗರಿಷ್ಠ ವಯೋಮಿತಿಯನ್ನು 55 ವರ್ಷಗಳಿಗೆ ಮಿತಿಗೊಳಿಸಲಾಗಿದೆ. ಸಾಮಾನ್ಯ ಅರ್ಹತೆ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಇಲ್ಲದಿದ್ದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪರಿಗಣಿಸಲು ಷರತ್ತುಗಳನ್ನು ಸಡಿಲಿಸುವ ಮೂಲಕಷರತ್ತು ಸಡಿಲಿಸಲಾಗಿದೆ” ಎಂದು ಅಧಿಸೂಚನೆಯಲ್ಲಿ ಸೇರಿಸಲಾಗಿದೆ.

