ಟೀಮ್ ಇಂಡಿಯಾಯು ಇಂಗ್ಲೆಂಡ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ 142 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಮಧುಮೇಹಿಗಳ ಗಮನಕ್ಕೆ: ಸಕ್ಕರೆ ಮಾತ್ರವಲ್ಲ, ನಿಮಗೆ ಈ ಆಹಾರಗಳೂ ವಿಷಕ್ಕೆ ಸಮಾನ..!
ಟೀಂ ಇಂಡಿಯಾದ ಅದ್ಭುತ ಆಲ್ರೌಂಡ್ ಪ್ರದರ್ಶನದಿಂದಾಗಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 142 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ, ಭಾರತ ಇಂಗ್ಲೆಂಡ್ ವಿರುದ್ಧ 3-0 ಸರಣಿಯನ್ನು ವೈಟ್ವಾಶ್ ಮಾಡಿದೆ.
ಗೆಲುವಿನ ಬಳಿಕ ಮಾತನಾಡಿದ ರೋಹಿತ್, ಇಂಗ್ಲೆಂಡ್ ವಿರುದ್ಧ ಸೀರೀಸ್ ಗೆದ್ದು ಖುಷಿ ತಂದಿದೆ. ನಾವು ಈ ಸೀರೀಸ್ನಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ಭಾವಿಸುತ್ತೇವೆ. ಅದರಲ್ಲೂ ಟೀಮ್ ಇಂಡಿಯಾದ ಆಟಗಾರರು ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡು ವಿಭಾಗಗಳಲ್ಲೂ ಆಲ್ರೌಂಡರ್ ಪ್ರದರ್ಶನ ನೀಡಿದ್ದಾರೆ ಎಂದರು ರೋಹಿತ್.
ಇನ್ನು, ಮುಂದೆ ಚಾಂಪಿಯನ್ಸ್ ಟ್ರೋಫಿ ಇದೆ. ವಿಶ್ವಕಪ್ನಲ್ಲೂ ನಾವು ಗೆದ್ದ ರೀತಿ ಎಲ್ಲರಿಗೂ ಗೊತ್ತಿದೆ. ತಂಡದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಇದೆ. ಅಗ್ರೆಸ್ಸಿವ್ ಆಗಿ ಬ್ಯಾಟಿಂಗ್ ಮಾಡಲು ಅವಕಾಶ ಇದೆ. ಇನ್ನೂ ಕೆಲವು ವಿಚಾರಗಳಲ್ಲಿ ಸುಧಾರಿಸಬೇಕಿದೆ. ಈ ಬಗ್ಗೆ ಮಾತಾಡೋ ಸಮಯ ಅಲ್ಲ. ನಾವು ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಎಲ್ಲಾ ರೀತಿಯಲ್ಲೂ ಸನ್ನದ್ದರಾಗಿದ್ದೇವೆ ಎಂದರು ರೋಹಿತ್. ಇಷ್ಟೇ ಅಲ್ಲ ಭಾರತದ ಗೆಲುವು ಎಲ್ಲರೂ ಕಾರಣ ಎಂದು ಕ್ರೆಡಿಟ್ರೋಹಿತ್ತಿದ್ದಾರೆ.