ಬೆಂಗಳೂರು: ಗುತ್ತಿಗೆಯಲ್ಲಿ ಶೇ.4ರಷ್ಟು ಮುಸ್ಲಿಂ ಮೀಸಲಾತಿ ನೀಡಲು ಸರ್ಕಾರದ ಚಿಂತನೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ʼನವರ ಯೋಗ್ಯತೆಗೆ ಕಳೆದ 20 ತಿಂಗಳಿಂದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದಾರೆ.
ಆದರೆ ಎಲ್ಲಿಯಾದರೂ ಕೆಲಸದ ಟೆಂಡರ್ ಕರೆದಿದ್ದಾರಾ? ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ಇಲ್ಲ, ಆದರೆ ಸರ್ಕಾರಿ ಗುತ್ತಿಗೆಯಲ್ಲಿ 4% ಮುಸ್ಲಿಂ ಮೀಸಲಾತಿ ನೀಡಲು ಹೊರಟಿದ್ದಾರೆ, ಬೇರೆಯವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವೇ ಎಂದು ಕಿಡಿಕಾರಿದರು.
ಎಚ್ಚರ.. ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದೆಯೇ..? ಹಾಗಿದ್ರೆ ಈ ತಪ್ಪು ಮಾಡಿದ್ರೆ 10 ಸಾವಿರ ರೂ. ದಂಡ..!
ಸಿಎಂ ನೀವೂ ಅಹಿಂದಾ ನಾಯಕರೇ ಆಗಿದ್ರೆ, ಸಮುದಾಯಕ್ಕೆ ಆರ್ಥಿಕ ಶಕ್ತಿ ನೀಡಲು ಪ್ರೋತ್ಸಾಹ ನೀಡಬೇಕಿತ್ತು. ಸವಿತಾ ಸಮಾಜ, ಗುಡಿಕೈಗಾರಿಕೆಗೆ ಆರ್ಥಿಕ ಬೆಂಬಲ ನೀಡಬೇಕಿತ್ತು. ಅದರ ಹೊರತಾಗಿ ಈಗ ಮುಸ್ಲಿಮರಿಗೆ ಕೊಡಲು ಹೊರಟಿದ್ದಾರೆ. ಇವರಿಗೆ ಜನರೇ ಉತ್ತರ ಕೊಡಬೇಕು. ಇವರು ಬಂಡರಿದ್ದಾರೆ, ದಪ್ಪ ಚರ್ಮದವರು. ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡ್ತೀವಿ, ಹೋರಾಟ ಮಾಡ್ತೀವಿ ಎಂದು ಆಕ್ರೋಶ ವ್ಯಕ್ತಪಡಿಸಿದರು.