ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ ವತಿಯಿಂದ 4ನೇ ರಾಷ್ಟೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್!

ಬೆಂಗಳೂರು : ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ ವತಿಯಿಂದ ರಾಜ್ಯಮಟ್ಟದ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್ ಆಯೋಜಿಸಲಾಗಿದೆ.

2021ನೇ ಸಾಲಿನ ಕ್ರೀಡಾಕೂಟವನ್ನು ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆಯ ವತಿಯಿಂದ ಇದೇ ತಿಂಗಳ 27ರಂದು ಸೈಫಿಂಚ್ ಸ್ಪೋರ್ಟ್ಸ್ ಸೆಂಟರ್, ಜೆ.ಪಿ.ನಗರ, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.

ಈ ಕ್ರೀಡಾಕೂಟವು ಹಲವಾರು ವಿಶೇಷತೆಗಳಿಂದ ಕೂಡಿದ್ದು 4ನೇ ರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ಗೆಆಟಗಾರರನ್ನು ಆಯ್ಕೆ ಮಾಡಲಾಗುವುದು. ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಟಗಾರರು ಆಗಮಿಸಲಿದ್ದು, ಅವರಿಗೆ ಪ್ರೋತ್ಸಾಹ ನೀಡಿ, ಉತ್ತೇಜನ ನೀಡುವ ಉದ್ದೇಶವನ್ನು ಹೊಂದಿದ್ದೇವೆ, ಅಲ್ಲದೆ ಕೆ.ಎನ್.ಗ್ರೂಪ್ ಸಂಸ್ಥೆಯವತಿಯಿಂದ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುವುದು, ಪಂದ್ಯಾವಳಿಯ ಒಂದು ಭಾಗವಾಗಿದೆ.

ವಿವರಣೆಯನ್ನು ಕರ್ನಾಟಕ ಅಂಗವಿಕಲರ ಸಂಸ್ಥೆಯ ಪದಾಧಿಕಾರಿಗಳಾದ ಎಂ. ಮಹದೇವ್‌ ಅರ್ಜುನ ಪ್ರಶಸ್ತಿ ಪುರಸ್ಕೃತರು ಹಾಗೂ ಸದರಿ ಸಂಸ್ಥೆಯ ಅಧ್ಯಕ್ಷರು, ಕೆ. ಗೋಪಿನಾಥ್ ಪ್ರಧಾನ ಕಾರ್ಯದರ್ಶಿಗಳು, , ಮಾದೇಶ್‌ಚಂದ್ರ, ಜಂಟಿ ಕಾರ್ಯದರ್ಶಿಗಳು, ಶ್ರೀ.ಎಂ.ಆರ್. ಮಹೇಶ್ ಗೌಡ ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳುಗಳು ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದರು.

Share

Leave a Reply

Your email address will not be published. Required fields are marked *

%d bloggers like this: