ಹುಬ್ಬಳ್ಳಿ: ಉಣಕಲ್ ಕ್ರಾಸ್ ಅಚ್ಚವ್ವ ಕಾಲೋನಿಯಲ್ಲಿನ ಕೊಠಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಟೋಟ್ ವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಾವನ್ನಪ್ಪಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರ ಬದುಕಿಸಲು ಪ್ರಯತ್ನ ಮಾಡಿದ್ವಿ,
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
4 ಎಕ್ಸ್ಪೋರ್ಟ್ ವೈದ್ಯರನ್ನ ಕರೆಯಿಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು ಆದರೆ ಇದನ್ನ ಮೀರಿ ಸುಟ್ಟ ಪರಿಣಾಮ ಹೆಚ್ಚಾಗಿದ್ದರಿಂದ ಉಳಿಸಿಕೊಳ್ಳಲಾಗಲ್ಲಿಲ್ಲ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎಸುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ ಇನ್ನು ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ
ಮೃತ ಪಟ್ಟ ಕುಟುಂಬಕ್ಕೆ ಮುಖ್ಯಮಂತ್ರಿ ನಿರ್ದೇಶನದ ಮೇಲೆ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದ ಅವರು, ಉಳಿದವರ ಕುಟುಂಬದ ಜೊತೆ ಸಮಾಲೋಚನೆ ಮಾಡಿ ಇನ್ನು ಹೆಚ್ಚಿನ ಚಿಕಿತ್ಸೆ ನೀಡುತ್ತೆ ಎಂದರು