ಬೆಂಗಳೂರು: ಯಶವಂತಪುರದಲ್ಲಿ ಇರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಆವರಣದಲ್ಲಿ ಸರ್ಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ (MB Patil) ಹೇಳಿದರು
ಬರಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಹೊಣೆ ಅಲ್ಲ, ಕೇಂದ್ರದ ಆರ್ಥಿಕ ದುಃಸ್ಥಿತಿ ಕಾರಣ: ಸಿಎಂ!
100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (KSDL) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂ ಕೆಎಸ್ಡಿಎಲ್ನಲ್ಲೂ ಅಳವಡಿಸಿಕೊಳ್ಳಲಾಗುವುದು. ಕೆಎಸ್ಡಿಎಲ್ ವತಿಯಿಂದಲೇ ಹಂತಹಂತವಾಗಿ ಇದನ್ನು ನಿರ್ಮಿಸಲಾಗುವುದು. ಇದರಿಂದ ಸಂಸ್ಥೆಯು ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಸುಲಭವಾಗಲಿದೆ ಎಂದು ನುಡಿದರು.