ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದೆ. ಈ ಸಂಬಂಧ ಸಿಎಂ ಆಫ್ ಕರ್ನಾಟಕ ಎಕ್ಸ್ ಮಾಡಿದ್ದು, ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.
ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ ಎಂದು ತಿಳಿಸಲಾಗಿದೆ. ಯೋಧರ ಸಾವು-ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ.
ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ.
ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ.
ಯೋಧರ ಸಾವು – ನೋವು… pic.twitter.com/I7Zf7B3YnG
— CM of Karnataka (@CMofKarnataka) December 5, 2023
ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ ಎಂದು ಸಿಎಂ ತಿಳಿಸಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ್ದ ಸಿಎಂ, ರಾಜ್ಯ ಸರ್ಕಾರದಿಂದ 50 ಲಕ್ಷ ಪರಿಹಾರ ಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಅಂತೆಯೇ ಇದೀಗ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ.