ಬೆಂಗಳೂರು: ಬಡವರ ಹಸಿವು ನೀಗಿಸಲು, ಕೈಗೆಟಕುವ ದರದಲ್ಲಿ ಆಹಾರ ಸಿಗುವಂತಾಗಲು ಮತ್ತೆ ಹೊಸ 50 ಇಂದಿರಾ ಕ್ಯಾಂಟೀನ್ಗಳು (Indira Canteen) ಬೆಂಗಳೂರಿನಲ್ಲಿ (Bengaluru) ತಲೆ ಎತ್ತಲಿವೆ.
Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?
ಬಿಬಿಎಂಪಿ ಬಜೆಟ್ನಲ್ಲಿ (BBMP Budget) ಘೋಷಿಸಿದ ಈ ಹೊಸ ಇಂದಿರಾ ಕ್ಯಾಂಟೀನ್ಗಳು ಸ್ಥಿರ ಅಥವಾ ಮೊಬೈಲ್ ಮೋಡ್ನಲ್ಲಿ ಸ್ಥಾಪನೆಯಾಗಲಿವೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈ ವರ್ಷ ಹೊಸದಾಗಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ. ಇಂದಿರಾ ಕ್ಯಾಂಟೀನ್ಗಳಿಗಾಗಿ ಈ ವರ್ಷದ ಬಜೆಟ್ನಲ್ಲಿ ಒಟ್ಟು 70 ಕೋಟಿ ರೂ.ಗಳನ್ನು ನೀಡಲಾಗಿದೆ.