ಬೆಂಗಳೂರು:- ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಭಾಷೆ ಪ್ರದರ್ಶಿಸಲು ವಿಫಲವಾದರೆ ದಂಡ ವಿಧಿಸಲಾಗುವುದು ಮತ್ತು ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಗೆ ತಿಳಿಸಿದರು.
ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಎನ್ಫೋರ್ಸ್ಮೆಂಟ್ ವಿಂಗ್ (ಜಾರಿ ಘಟಕ) ಅನ್ನು ಮಾಡಲಾಗುತ್ತದೆ. ಜಾರಿ ಅಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳು ಇದರಲ್ಲಿರುತ್ತಾರೆ. ಕಾನೂನು ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ಎಂಟು ವಲಯ ಆಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಂದು ಸಚಿವರು ಹೇಳಿದರು.
ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆ್ಯೊ್ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಿ, ಅವರು ಆ ದೂರುಗಳ ಬಗ್ಗೆ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಸಚಿವರು ದನಕ್ಕೆ ವಿವರಿಸಿದರು.