ಬೆಂಗಳೂರು:- ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ನಡೆಯುತ್ತಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕದ ಗಂಡಸರು ಇನ್ಮುಂದೆ ಕಾಂಗ್ರೆಸ್ ಮತ ಹಾಕಬೇಡಿ: ಬಿಜೆಪಿ ಶಾಸಕ ಯತ್ನಾಳ್!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಶೇ 60 ರಷ್ಟು ಕಮಿಷನ್ ಇದೆ ಎಂದು ಅವರ ಕಾಂಗ್ರೆಸ್ ಗುತ್ತಿಗೆದಾರರೇ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸೌಧದಲ್ಲೇ ಮಂತ್ರಿಗಳಿಗೆ ಕಮಿಷನ್ ಹೋಗುತ್ತಿದೆ ಎಂದು ಕಾಂಗ್ರೆಸ್ಗೆ ತಿವಿದಿದ್ದಾರೆ.
ಪ್ರತಿ ಇಲಾಖೆಯಲ್ಲೂ ಸಚಿವರಿಗೆ ಮೊದಲು ಪರ್ಸೆಂಟೇಜ್ ಕೊಟ್ಟು ಆಮೇಲೆ ಹಣ ಬಿಡುಗಡೆ ಮಾಡುವ ಕೆಲಸ ಆಗುತ್ತಿದೆ ಎಂದು ಕುಮಾರಸ್ವಾಮಿ ಸ್ಫೋಟಕ ಆರೋಪ ಮಾಡಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ, ಸಾಬೀತು ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಸರ್ಕಾರದ ವಿರುದ್ಧ 60 ಪರ್ಸೆಂಟ್ ಲಂಚದ ಆರೋಪ ಮಾಡಿರುವ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಆರೋಪ ಸಾಬೀತುಪಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಯಿ ಚಪಲಕ್ಕೆ ಮಾತನಾಡುತ್ತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.