ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ IBPS ತನ್ನಲ್ಲಿ ಖಾಲಿ ಇರುವ 6128 ಕ್ಲರ್ಕ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಿತ್ತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಅರ್ಹ ಪದವೀಧರರು ಈ ಕೂಡಲೇ ಅರ್ಜಿ ಸ್ಲಲಿಸಬೇಕು.
ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಕರ್ನಾಟಕದಲ್ಲಿ ಖಾಲಿ ಇರುವ 457 ಹುದ್ದೆಗಳಿಗೂ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಇಲ್ಲಿನ ಮಾಹಿತಿ ತಿಳಿದು, ಸಾಧ್ಯವಾದಲ್ಲಿ ಅಧಿಸೂಚನೆ ಓದಿಕೊಂಡು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು.
ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.
ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 21, 2024 ಕೊನೆ ದಿನ. IBPS ಕ್ಲರ್ಕ್ 2024ರ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯನ್ನು ಆಗಸ್ಟ್ 24, 25 ಮತ್ತು 31, 2024 ರಂದು ನಡೆಸಲಾಗುವುದು. ಮುಖ್ಯ ಪರೀಕ್ಷೆಯನ್ನು ಅಕ್ಟೋಬರ್ 13, 2024 ರಂದು ನಡೆಸಲಾಗುತ್ತದೆ.
ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.
ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.
ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.
ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.
ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.
ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು