ಚಾಮರಾಜನಗರ: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ಇಂದು ನವ ದಾಂಪತ್ಯಕ್ಕೆ ಕಾಲಿಟ್ಟರು.
ವಾ.ಓ: ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಿಜೃಂಭಣೆಯಿಂದ ಇಂದು ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ 63 ನೂತನ ಜೋಡಿಗಳು ಸತಿ-ಪತಿಗಳಾದರು.
ಸುತ್ತೂರು ಶ್ರೀ ಮತ್ತು ಸಾಲೂರು ಮಠದ ಸ್ವಾಮೀಜಿ ಹಾಗೂ ಸಾರಿ ಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೂತನ ದಂಪತಿಗಳಿಗೆ ಮಾಂಗಲ್ಯ ವಿತರಿಸಿ ಶುಭ ಹಾರೈಸಿದರು.
ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಪ್ರತಿ ವರ್ಷ ಸಾಮೂಹಿಕ ವಿವಾಹ ನಡೆಯಲಿದ್ದು ಮಾದಪ್ಪನ ಸನ್ನಿಧಿಯಲ್ಲಿ ಸತಿಪತಿಗಳಾಗುವುದು ಪುಣ್ಯವೆಂದೇ ಭಕ್ತರ ನಂಬಿಕೆಯಾಗಿದೆ.
ಸಾಮೂಹಿಕ ವಿವಾಹದಲ್ಲಿ ಭಾಗಿಯಾದ ನವಜೋಡಿಗಳಿಗೆ 4 ಮಾಂಗಲ್ಯ, ರೇಷ್ಮೆ ಸೀರೆ, ಪಂಚೆ- ಶಲ್ಯ, ಬೆಳ್ಳಿ ಕಾಲುಂಗರವನ್ನು ಪ್ರಾಧಿಕಾರ ನೀಡಲಿದೆ. ಸಚಿವರಿಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ ಇದ್ದರು.
ಸಿಎಂ ಸಿದ್ದರಾಮಯ್ಯ ಗೈರು:
ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರಕ್ಕೆ ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದು ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಆದರೆ, ಈ ಬಾರಿ ಸಿದ್ದರಾಮಯ್ಯ ಬರುತ್ತಾರೆ ಎನ್ನಲಾಗುತ್ತಿದ್ದರೂ ಕೊನೆ ದಿನಗಳಲ್ಲಿ ರದ್ದಾಯಿತು. ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕೂಡ ಗಜ ಪಯಣ ಕಾರ್ಯಕ್ರಮದಲ್ಲಿ ಭಾಗಿಯಾದ್ದರಿಂದ ಸಾಮೂಹಿಕ ವಿವಾಹಕ್ಕೆ ಗೈರಾದರು.